ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಭಯೋತ್ಪಾದಕನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸುತ್ತಿದ್ದ ಒರ್ವ ಭಯೋತ್ಪಾದಕನನ್ನು ಸೇನಾಪಡೆಗಳು ಹತ್ಯೆ ಮಾಡಿವೆ.
ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಗಡಿ ದಾಟಲು ಯತ್ನಿಸುತ್ತಿದ್ದ ಭಯೋತ್ಪಾದಕನ ಚಲನವಲನವನ್ನು ಗಸ್ತು ಸಿಬ್ಬಂದಿ ಗಮನಿಸಿ ಕಾರ್ಯಾಚರಣೆ ನಡೆಸಿದೆ. ಆ ಬಳಿಕ ಗುಂಡಿನ ದಾಳಿ ನಡೆಸಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಹೆಚ್ಚಿನ ಸೇನೆಯನ್ನು ನಿಯೋಜಿಸಲಾಗಿದೆ. ಒಳನುಸುಳುವಿಕೆ ತಡೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!