ಹೊಸದಿಗಂತ ಡಿಜಿಟಲ್ ಡೆಸ್ಕ್:
ಭದ್ರತಾ ಪಡೆ-ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕ ಹನತನಾದ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಗುರುವಾರ ಬೆಳ್ಳಂಬೆಳಗ್ಗೆ ಶೋಪಿಯಾನ್‌ನ ಕಥೋಹಾಲನ್ ಪ್ರದೇಶದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಭಯೋತ್ಪಾದಕನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಭದ್ರತಾ ಪಡೆಗಳು ಉಗ್ರರ ಬೇಟೆ ಮುಂದುವರಿಸಿವೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಗಡಿಯಲ್ಲಿ ಇತ್ತೀಚೆಗೆ ಭಯೋತ್ಪಾದಕರ ಉಪಟಳ ಹೆಚ್ಚಿದ್ದು, ಭದ್ರತಾ ಪಡೆಗಳು ಹೆಚ್ಚಿನ ನಿಗಾ ಇರಿಸಿವೆ. ಈ ಕಾರಣದಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ್ಗೆ ಗುಂಡಿನ ಚಕಮಕಿಯ ಘಟನೆಗಳು ನಡೆಯುತ್ತಿವೆ.