May 20, 2026
Wednesday, May 20, 2026
spot_img

ಪಾಕ್ ನಲ್ಲಿ ಉಗ್ರರ ‘ಮರಣಮೃದಂಗ’: ಹಿಜ್ಬುಲ್ ಟಾಪ್ ಕಮಾಂಡರ್‌ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದಲ್ಲಿ ಉಗ್ರ ಸಂಘಟನೆಗಳ ನಾಯಕರ ಮೇಲೆ ಸರಣಿ ದಾಳಿ ಮುಂದುವರಿದಿದ್ದು, ಮತ್ತೊಬ್ಬ ಪ್ರಮುಖ ಕಮಾಂಡರ್ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಪ್ರಮುಖ ಸದಸ್ಯ ಸಜ್ಜದ್ ಅಹ್ಮದ್ ಮೃತದೇಹ ಪತ್ತೆಯಾಗಿದೆ.

ಮೂಲಗಳ ಪ್ರಕಾರ, ಸಜ್ಜದ್ ಅಹ್ಮದ್ ತಮ್ಮ ನಿವಾಸದಲ್ಲೇ ಸಾವನ್ನಪ್ಪಿದ್ದು, ಇದು ಸಹಜ ಸಾವು ಅಲ್ಲ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ಇತ್ತೀಚೆಗೆ ಜೈಶ್-ಎ-ಮೊಹಮ್ಮದ್ ಸಂಘಟನೆಯ ಹಿರಿಯ ಉಗ್ರ ನಾಯಕನ ಹತ್ಯೆಯ ನಂತರವೇ ಈ ಘಟನೆ ನಡೆದಿರುವುದು ಗಮನ ಸೆಳೆಯುತ್ತಿದೆ. ಪಾಕಿಸ್ತಾನದಲ್ಲೇ ಉಗ್ರ ನಾಯಕರ ಮೇಲೆ ನಡೆಯುತ್ತಿರುವ ದಾಳಿ ಸರಣಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಜ್ಜದ್ ಅಹ್ಮದ್ ಹತ್ಯೆ ಸುತ್ತ ಹಲವು ಅನುಮಾನಗಳು ಕಾಡುತ್ತಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಹೆಚ್ಚಿಸಿದ್ದು, ಭದ್ರತಾ ಸಂಸ್ಥೆಗಳು ತನಿಖೆ ಆರಂಭಿಸಿರುವುದಾಗಿ ವರದಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !