ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜಮ್ಮು-ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಸಂಜೆ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಸೇನಾಧಿಕಾರಿ ಹಾಗೂ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೂಂಚ್-ರಾಜೌರಿ ಅರಣ್ಯದಲ್ಲಿ ಸೇನೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಸಮಯದಲ್ಲಿ ಓರ್ವ ಜೆಸಿಒ ಹಾಗೂ ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ.
ಕಳೆದ ನಾಲ್ಕು ದಿನದ ಹಿಂದಷ್ಟೆ ಡೇರಾ ಕಿ ಗಾಲಿ ಅರಣ್ಯ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ ಐವರು ಸೈನಿಕರು ಹುತಾತ್ಮರಾಗಿದ್ದಾರೆ.