ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ ಒಂಬತ್ತು ನಾಗರಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರದ ಪ್ರವಾಸಿ ಸ್ವಾಗತ ಕೇಂದ್ರದ ಬಳಿಯ ಮಾರುಕಟ್ಟೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟವು ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದ್ದು, ಅಲ್ಲಿನ ಅಂಗಡಿಯವರು ರಕ್ಷಣೆಗಾಗಿ ಪರದಾಡಿದರು.
ಗಾಯಗೊಂಡವರಲ್ಲಿ ಎಂಟು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದ್ದಾರೆ. ಎಲ್ಲರೂ ಇಲ್ಲಿಯವರೆಗೆ ಸ್ಥಿರವಾಗಿದ್ದಾರೆ ಎಂದು ಎಸ್‌ಎಂಎಚ್‌ಎಸ್‌ನ ವೈದ್ಯಕೀಯ ಅಧೀಕ್ಷಕ ಡಾ ತಸ್ನೀಮ್ ಶೋಕತ್ ಹೇಳಿದ್ದಾರೆ.
ಗಾಯಗೊಂಡವರನ್ನು ಸ್ಥಳಾಂತರಿಸಲು ಮತ್ತು ಭಯೋತ್ಪಾದಕರ ಪತ್ತೆಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಪೊಲೀಸರು ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿವೆ.