ಹೊಸದಿಗಂತ ಡಿಜಿಟಲ್ ಡೆಸ್ಕ್;
ಜಮ್ಮು-ಕಾಶ್ಮೀರದಅನಂತನಾಗ್ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆದಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯ ವೇಳೆ ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಇದಾದ ಬಳಿಕವೂ ಭದ್ರತಾ ಸಿಬ್ಬಂದಿಯು ಎ ಜಾಗವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಅನಂತನಾಗ್ ಜಿಲ್ಲೆಯ ಅಲ್ಹಾನ್ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದಾದ ಬಳಿಕವೇ ಹೆಚ್ಚಿನ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ.
‘ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿರುವ ಜತೆಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಮುಂದುವರಿಸಿದ್ದಾರೆ’ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.