ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರದ ಸ್ಥಳೀಯ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಐವರು ಪತ್ರಕರ್ತರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ಭಯೋತ್ಪಾದಕರ ಬೆದರಿಕೆಯಿಂದ ಪತ್ರಕರ್ತರು ಈ ನಿರ್ಧಾರಕ್ಕೆ ಬಂದಿದ್ದಾರೆ. ಇತ್ತೀಚೆಗಷ್ಟೇ ಭಯೋತ್ಪಾದಕರು ಸಾಮಾಜಿಕ ಜಾಲತಾಣದಲ್ಲಿ 10 ಮಂದಿ ಪತ್ರಕರ್ತರ ಪಟ್ಟಿ ಬಿಡುಗಡೆ ಮಾಡಿದ್ದರು, ಭದ್ರತಾಪಡೆಗಳ ಪರವಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಹೇಳಿದ್ದರು. ಪಟ್ಟಿಯಲ್ಲಿದ್ದ ಕೆಲವರು ತಕ್ಷಣವೇ ಸಾಮಾಜಿಕ ಜಾಲತಾಣದಲ್ಲಿಯೇ ರಾಜೀನಾಮೆ ಘೋಷಿಸಿದ್ದಾರೆ.
ಸಾರ್ವಜನಿಕವಾಗಿ ಭ್ರಷ್ಟರು ಎಂದು ಪೋಸ್ಟ್ ಮಾಡಿದ್ದು, ಜನರಲ್ಲಿ ದ್ವೇಷ ಭಾವನೆ ಬಿತ್ತುತ್ತಿದ್ದಾರೆ. ಮಾಧ್ಯಮದವರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಪತ್ರಕರ್ತರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.