ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಸುಂದರ್‌ಬಾನಿ ಪ್ರದೇಶದಲ್ಲಿ ಭಾರತೀಯ ಸೇನೆಯ ವಾಹನದ ಮೇಲೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ಭಾರತೀಯ ಸೈನಿಕರ ವಾಹನವನ್ನು ಗುರಿಯಾಗಿಸಿ ದಟ್ಟ ಅರಣ್ಯ ಪ್ರದೇಶದಿಂದ ದಾಳಿ ನಡೆಸಿದ್ದಾರೆ. ಇಡೀ ಪ್ರದೇಶವನ್ನು ಭಾರತೀಯ ಭದ್ರತಾ ಪಡೆ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ಆರಂಭಿಸಿದೆ.
ವರದಿಗಳ ಪ್ರಕಾರ, ಭಯೋತ್ಪಾದಕರು ಸೇನಾ ವಾಹನದ ಮೇಲೆ ಒಂದರಿಂದ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ದಾಳಿ ನಡೆದ ಸಮಯದಲ್ಲಿ ಸೇನಾ ವಾಹನವು ಗಸ್ತು ತಿರುಗುತ್ತಿತ್ತು. ಈ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ಇನ್ನೂ ವರದಿಯಾಗಿಲ್ಲ.