ನೈಜೀರಿಯಾ ಚರ್ಚ್‌ನಲ್ಲಿ ಮಾರಣ ಹೋಮ: ಬಾಂಬ್‌, ಗುಂಡಿನ ದಾಳಿಗೆ 50 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕ್ಯಾಥೋಲಿಕ್‌ ಚರ್ಚ್‌ನಲ್ಲಿ ಬಂದೂಕು ಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸುಮಾರು 50ಜನ ಸಾವನ್ನಪ್ಪಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ. ಭಾನುವಾರ ಒಂಡೋ ರಾಜ್ಯದ ಸೇಂಟ್ ಫ್ರಾನ್ಸಿಸ್ ಕ್ಯಾಥೋಲಿಕ್ ಚರ್ಚ್ ನಲ್ಲಿ ಪ್ರಾರ್ಥನಾ ಸಮಯದಲ್ಲಿ ಚರ್ಚ್‌ಗೆ ನುಗ್ಗಿದ ಬಂದೂಕು ಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಕ್ಕಳೂ ಸೇರಿದಂತೆ ಕನಿಷ್ಟ 50ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಾಗಬಹುದೆಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ಚರ್ಚ್‌ ರಕ್ತದ ಮಡುವಿನಿಂದ ತುಂಬಿ ಹೋಯಿತು. ಅಧ್ಯಕ್ಷ ಮುಹಮ್ಮದ್ ಬುಹಾರಿ ದಾಳಿಯನ್ನು ಹೇಯ ಕೃತ್ಯ ಎಂದು ಖಂಡಿಸಿದ್ದಾರೆ. ದಾಳಿಕೋರರ ಗುರುತು ಮತ್ತು ಉದ್ದೇಶ ಏನೆಂಬುದು ಸ್ಪಷ್ಟವಾಗಿಲ್ಲ. ಚರ್ಚ್‌ನಲ್ಲಿ ಸ್ಪೋಟಕಗಳನ್ನು ಸ್ಪೋಟಿಸುವುದರ ಜೊತೆಗೆ ಗುಂಡಿನ ದಾಳಿ ನಡೆಸಿದ್ದಾರೆ ಎಂದರು.

ಒಂಡೋ ಗವರ್ನರ್ ಅರಕುನ್ರಿನ್ ಒಲುವರೊಟಿಮಿ ಅಕೆರೆಡೋಲು ರಾಜಧಾನಿ ಅಬುಜಾಗೆ ತಮ್ಮ ಪ್ರವಾಸವನ್ನು ಕಡಿತಗೊಳಿಸಿದರು. ದಾಳಿಕೋರರನ್ನು ಬೇಟೆಯಾಡಲು ನಮಗಿರುವ ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲನೆ ನಡೆಸುತ್ತೇವೆ. ಅವರು ನಡೆಸಿರುವ ಘೋರ ದುರಂತಕ್ಕೆ ಬೆಲೆ ಕಟ್ಟುವಂತೆ ಮಾಡಿಯೇ ತೀರುತ್ತೇವೆ ಎಂದು ಶಪಥ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!