ಜಮ್ಮು-ಕಾಶ್ಮೀರದ ಪ್ರವಾಸಿ ರೆಸಾರ್ಟ್‌ನಲ್ಲಿ ಭಯೋತ್ಪಾದಕರ ದಾಳಿ: ನಾಲ್ಕು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣದ ಬೈಸರನ್ ಕಣಿವೆಯ ಪ್ರವಾಸಿ ರೆಸಾರ್ಟ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಕನಿಷ್ಠ 4 ಪ್ರವಾಸಿಗರು ಗಾಯಗೊಂಡಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಗಾಯಗೊಂಡವರು ರಾಜಸ್ಥಾನದಿಂದ ಬಂದಿದ್ದವರು ಎಂದು ತಿಳಿದು ಬಂದಿದೆ.

ಈ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ, ಜೈಶ್-ಎ-ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನ ಕೈವಾಡವಿರಬಹುದು ಎಂದು ಶಂಕಿಸಲಾಗಿದೆ.

ಭದ್ರತಾ ಪಡೆಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನದಲ್ಲಿದ್ದು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ಸಹಾಯವನ್ನು ಒದಗಿಸಲಾಗುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!