ಕಾಶ್ಮೀರಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಹತರಾದ ಉಗ್ರರನ್ನು ತ್ರಾಲ್‌ನ ಶಾಹಿದ್ ರಾಥರ್ ಮತ್ತು ಶೋಪಿಯಾನ್ ಪ್ರದೇಶದ ಉಮರ್ ಯೂಸುಫ್ ಎಂದು ಗುರುತಿಸಲಾಗಿದೆ. ಈ ಉಗ್ರರು ಕಾಶ್ಮೀರಿ ಕಣಿವೆಯಲ್ಲಿ ನಾಗರಿಕ ಹತ್ಯೆ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಸೋಮವಾರ ತಡರಾತ್ರಿಯಿಂದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ರಾಜ್‌ಪೋರಾದಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಎರಡು ಎಕೆ ರೈಫಲ್‌ಗಳು ಮತ್ತು ದೋಷಾರೋಪಣೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವರ್ಷದ ಕಳೆದ ಐದು ತಿಂಗಳಲ್ಲಿ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮತ್ತು ಜೈಶ್-ಎ-ಮೊಹಮ್ಮದ್‌ಗೆ ಸೇರಿದ 26 ವಿದೇಶಿ ಭಯೋತ್ಪಾದಕರ ಹತ್ಯೆ ಮಾಡಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!