ಭಾರತದ ಕ್ರಮಕ್ಕೆ ಉರ್ಕೊಂಡ ಟೆರರಿಸ್ಟ್ಸ್‌: ಕಾಶ್ಮೀರಿ ಪಂಡಿತರು-ಮುಸ್ಲಿಮೇತರ ವಲಸೆ ಕಾರ್ಮಿಕರ ಮೇಲೆ ದಾಳಿಗೆ ಸಂಚು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಉಗ್ರರ ಮನೆಗಳನ್ನು ಕೆಡವಿ ಭಾರತೀಯ ಸೇನೆ ಕೈಗೊಂಡ ದಿಟ್ಟ ಕ್ರಮ ಉಗ್ರರ ಕಣ್ಣು ಕೆಂಪಾಗುವಂತೆ ಮಾಡಿದ್ದು, ಪ್ರತೀಕಾರವಾಗಿ ಕಾಶ್ಮೀರಿ ಪಂಡಿತರು-ಮುಸ್ಲಿಮೇತರ ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ್ದಾರೆಂದು ಗುಪ್ತಚರ ದಳ ಎಚ್ಚರಿಕೆ ನೀಡಿದೆ.

ಪಹಲ್ಗಾಮ್ ಉಗ್ರರ ದಾಳಿ ಬಳಿಕ ಸಕ್ರಿಯ ಭಯೋತ್ಪಾದಕರಿಗೆ ಸಂಬಂಧಿಸಿದ ಒಂಬತ್ತು ಮನೆಗಳನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿತ್ತು. ಇದಕ್ಕೆ ಪಾಕಿಸ್ತಾನದ ಮೂಲದ ನಿಷೇಧಿತ ಸಂಘಟನೆ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ)ದ ಅಂಗ ಸಂಘಟನೆಯಾಗಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಪ್ರತೀಕಾರ ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉಗ್ರರ ಈ ಗುಂಪಿನಲ್ಲಿ ಅಫ್ಘಾನಿಸ್ತಾನದಲ್ಲಿ ಯುದ್ಧಭೂಮಿ ಅನುಭವ ಹೊಂದಿರುವ ವಿದೇಶಿ ಭಯೋತ್ಪಾದಕರೂ ಸೇರಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಪಾಕಿಸ್ತಾನ ಮೂಲದ ಉಗ್ರರು ಕಾಶ್ಮೀರಕ್ಕೆ ನುಸುಳಿದ್ದು, ದಾಳಿಗೆ ಸಂಚು ರೂಪಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಉಗ್ರ ಸಂಘಟನೆ, ಇದೇ ರೀತಿಯ ಕ್ರಮ ಕೈಗೊಳ್ಳುತ್ತಿದ್ದರೆ, ಮುಂದೆ ಮತ್ತಷ್ಟು ದಾಳಿಗಳನ್ನು ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!