Wednesday, June 29, 2022

Latest Posts

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಪೊಲೀಸ್ ಅಧಿಕಾರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಆಮ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಎಂದು ಪೊಲೀಸ್ ಅಧಿಕಾರಿಗೆ ಗಾಯಗೊಂಡಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಎಎಸ್​​ಐ ಶಬ್ಬೀರ್ ಅಹಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಯೋತ್ಪಾದಕರು ಭದ್ರತಾ ಅಧಿಕಾರಿಗಳು ಮತ್ತು ನಾಗರಿಕರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ. ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಹೆಚ್ಚಿನ ವಿವರಗಳನ್ನ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss