ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದಕರನ್ನು ಕೊಲ್ಲುವ ಬದಲು ಜೀವಂತವಾಗಿ ಹಿಡಿಯಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ಮತ್ತೆ ಉಗ್ರವಾದ ತಲೆದೋರಿದೆ. ಇಂದು ಕೂಡ ಘರ್ಷಣೆ ನಡೆದಿದ್ದು, ಮೂವರು ಉಗ್ರರು ಹತರಾಗಿದ್ದಾರೆ. ಈ ವೇಳೆ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಕಣಿವೆಯಲ್ಲಿ ನಡಿತಿರೋ ಎನ್‌ಕೌಂಟರ್‌ಗಳ ಬಗ್ಗೆ ಜನರಿಗೆ ಭಾರಿ ಅನುಮಾನವಿದೆ. ಇತ್ತೀಚಿನ ಭಯೋತ್ಪಾದಕ ದಾಳಿಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವಂತೆ ಕಂಡುಬರುತ್ತಿದೆ. ಹೀಗಾಗಿ ಭಯೋತ್ಪಾದಕರನ್ನು ಹತ್ಯೆ ಮಾಡುವ ಬದಲು ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅವರ ತಂತ್ರಗಾರಿಕೆ ಗೊತ್ತಾಗುತ್ತದೆ. ಕೇಂದ್ರ ಸರಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಫಾರೂಕ್ ಆಗ್ರಹಿಸಿದ್ದಾರೆ.