ಮುಂದಿನ ವಾರಾಂತ್ಯದೊಳಗೆ TET ಫಲಿತಾಂಶ: ಸಚಿವ ನಾಗೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪದವೀಧರ ಶಿಕ್ಷಕ ಅಭ್ಯರ್ಥಿಗಳಿಗೆ ಕಳೆದ ನವೆಂಬರ್‌ 6ರಂದು ನಡೆಸಲಾಗಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್-ಟಿಇಟಿ) ಪರೀಕ್ಷೆಯ ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಮಾಹಿತಿ ಹಂಚಿಕೊಂಡಿರುವ ನಾಗೇಶ್‌, ‘ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಮುಂದಿನ ವಾರಾಂತ್ಯದೊಳಗೆ ಪ್ರಕಟಿಸಲಾಗುವುದು’ ಎಂದು ಶಿಕ್ಷಕ ಅಭ್ಯರ್ಥಿಗಳಿಗೆ ಸಂದೇಶ ರವಾನಿಸಿದ್ದಾರೆ.

ಕಳೆದ ವರ್ಷ 15,000 ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ಮುಕ್ತಾಯಗೊಂಡ ತಕ್ಷಣವೇ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಕರೆಯಲಾಗಿತ್ತು. ಅರ್ಜಿ ಸಲ್ಲಿಕೆಯ ನಂತರದ ಒಂದೆರಡು ತಿಂಗಳಲ್ಲಿ ಟಿಇಟಿ ಪಲಿತಾಂಶ ನಡೆಸಿದ್ದರು. ನ.೬ರಂದು ರಾಜ್ಯಾದ್ಯಂತ ಒಟ್ಟು 3,32,913 ಅಭ್ಯರ್ಥಿಗಳು ಬರೆದಿದ್ದರು. ಈಗ ಫಲಿತಾಂಶ ಬಂದಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆದುಕೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!