ಪಠ್ಯ ಪರಿಷ್ಕರಣೆ ಕುರಿತು ದೇವೇಗೌಡರ ಪತ್ರವನ್ನು ಗಂಭೀರ ಪರಿಗಣಿಸುತ್ತೇನೆ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಠ್ಯ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಜೊತೆ ಚರ್ಚಿಸಿ ಏನೆಲ್ಲಾ ಬದಲಾವಣೆ ಮಾಡಲು ಸಾಧ್ಯವೋ ಅದನ್ನೆಲ್ಲಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಆರ್.ಟಿ. ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ದೇವೇಗೌಡರು ನಮಗೆಲ್ಲರಿಗೂ ಹಿರಿಯರು, ಅವರು ಪಠ್ಯ ಕ್ರಮದ ಬಗ್ಗೆ ಪತ್ರ ಬರೆದಿದ್ದಾರೆ. ನಾನು ನಾಳೆ ಶಿಕ್ಷಣ ಇಲಾಖೆ ಮುಖ್ಯಸ್ಥರ ಜತೆ ಚರ್ಚಿಸುತ್ತೇನೆ. ದೇವೇಗೌಡರು ಬರೆದಿರುವ ಪತ್ರದ ಸಾರವನ್ನು ಸಂಪೂರ್ಣ ಅವಲೋಕಿಸುತ್ತೇವೆ. ಅವರು ಏನೆಲ್ಲ ಸಲಹೆ ಕೊಟ್ಟಿದ್ದಾರೋ ಅವುಗಳನ್ನು ಗಂಭೀರ ಪರಿಗಣಿಸುತ್ತೇವೆ. ಅವರಿಗೆ ಉತ್ತರವನ್ನು ಗೌರವಪೂರ್ವಕವಾಗಿ ಬರೆಯುತ್ತೇನೆ ಎಂದರು.
ಬೊಮ್ಮಾಯಿ ಆಡಳಿತಕ್ಕೆ ಮೋದಿ ಮೆಚ್ಚುಗೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ರಾಜ್ಯದಲ್ಲೂ ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮತ್ತು ಜನಪರ ಯೋಜನೆಗಳ ಜಾರಿ ಆಗಿದೆ. ಕೇಂದ್ರವು ದೊಡ್ಡ ಪ್ರಮಾಣದಲ್ಲಿ ಹಣ ನೀಡಿ ಅವರ ಸಹಭಾಗಿತ್ವದಲ್ಲಿ ಹಲವು ಯೋಜನೆಗಳನ್ನು ಜಾರಿ ಮಾಡಿರುವುದನ್ನು ಅವರು ನೋಡಿದ್ದಾರೆ. ಮೋದಿಯವರ ಮೆಚ್ಚುಗೆ ನನಗೆ ದೊಡ್ಡ ಶಕ್ತಿ ನೀಡಿದೆ. ನಾನು ಇನ್ನಷ್ಟು ಬದ್ಧತೆಯಿಂದ, ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಲು ಅವರ ಮೆಚ್ಚುಗೆ ಪುಷ್ಟಿ ಕೊಟ್ಟಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!