Sunday, December 3, 2023

Latest Posts

ಮಕ್ಕಳಿಗೆ ಸಮಸ್ಯೆಯಾಗದ ರೀತಿ ಪಠ್ಯ ಪರಿಷ್ಕರಣೆ: ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಕ್ಕಳಿಗೆ ಸಮಸ್ಯೆಯಾಗದ ರೀತಿ ಪಠ್ಯ ಪರಿಷ್ಕರಣೆ ಮಾಡಲಾಗುವುದು. ಮಕ್ಕಳ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಪಠ್ಯಪರಿಷ್ಕರಣೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆ ಈಗಾಗಲೇ ಒಂದು ಹಂತಕ್ಕೆ ಬಂದಿದೆ. ಮಕ್ಕಳಿಗೆ ಸಮಸ್ಯೆಯಾಗದಂತೆ ರಾಜ್ಯದಲ್ಲಿ ಹಂತ ಹಂತವಾಗಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಚರ್ಚೆ ನಡೆಸಲಾಗುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದರು.

ಶಾಲಾ ತರಗತಿ ಪ್ರಾರಂಭಿಸಲು ಇನ್ನೂ 15 ದಿನಗಳು ಬೇಕು. ಮಕ್ಕಳಿಗೆ ತೊಂದರೆ ಆಗದಂತೆ ಪಠ್ಯಪರಿಷ್ಕರಣೆ ಮಾಡಲಾಗುತ್ತೆ. ನಿರ್ದಿಷ್ಟವಾಗಿ ಇಂತಹ ಪಾಠವೇ ತೆಗೆಯುತ್ತೇವೆ ಅಂತ ಹೇಳಲ್ಲ ಎಂದು ಮಧು ಬಂಗಾರಪ್ಪ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!