ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ ಜವಳಿ ಪಾರ್ಕ್, ಜವಳಿ ಉದ್ಯಮಕ್ಕೆ ಭಾರೀ ಉತ್ತೇಜನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಜವಳಿ ಉದ್ಯಮಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಏಳು ಬೃಹತ್ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ.

ಏಳರಲ್ಲಿ ಒಂದು ಪಾರ್ಕ್ ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಜವಳಿ ಪಾರ್ಕ್ ಸ್ಥಾಪನೆಯಾಗುತ್ತಿರುವ ಘೋಷಣೆ ಮಾಡಿದ್ದಾರೆ.

ಕರ್ನಾಟಕ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಏಳು ಜವಳಿ ಕೇಂದ್ರಗಳು ತಲೆಯೆತ್ತಲಿವೆ.

ಜವಳಿ ವಲಯಕ್ಕೆ ಈ ಪಾರ್ಕ್‌ಗಳಿಂದ ಬೇಕಾದ ಅತ್ಯಾಧುನಿಕ ಸೌಕರ್ಯಗಳು ಸಿಗಲಿವೆ. ಕೋಟಿಗಟ್ಟಲೆ ಬಂಡವಾಳ ಹರಿದುಬರುತ್ತದೆ. ಅಲ್ಲದೆ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!