ಕೆಜಿಎಫ್‌- 2 ಕನ್ನಡದಲ್ಲಿ ವೀಕ್ಷಿಸಿ ಮೆಚ್ಚಿಕೊಂಡ ಸೂಪರ್‌ ಸ್ಟಾರ್‌ ರಜನೀಕಾಂತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಭಾರತೀಯ ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಚೆನ್ನೈನಲ್ಲಿ ಕೆಜಿಎಫ್‌ ಚಾಪ್ಟರ್‌–2 ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ.
ಚಿತ್ರವನ್ನು ನೋಡಿ ಮೆಚ್ಚಿಕೊಂಡ ರಾಜನೀಕಾಂತ್‌ ಅಭಿನಂದನೆ ಸಲ್ಲಿಸಲು ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಪ್ರೊಡಕ್ಷನ್ಸ್‌ಗೆ ಕರೆ ಮಾಡಿ ಚಿತ್ರದ ಯಶಸ್ಸಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಏ.14ರಂದು ವಿಶ್ವದಾದ್ಯಂತ ತೆರೆಕಂಡಿದೆ. ‘ರಾಕಿ ಭಾಯ್’  ಮ್ಯಾಜಿಕ್ ಗೆ ಜನರು ಮನಸೋತಿದ್ದಾರೆ. ಚಿತ್ರವು ಭರ್ಜರಿ ಯಶಸ್ಸು ದಾಖಲಿಸಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್, ರಾವ್ ರಮೇಶ್, ಈಶ್ವರಿ ರಾವ್, ಪ್ರಕಾಶ್ ರಾಜ್ ಮುಂತಾದ ದಿಗ್ಗಜ ನಟರ ತಾರಾಂಗಣವಿದೆ. ಚಿತ್ರವು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ತೆರೆಗೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!