ಅಭಿಮಾನಿ ಕಡೆ ಗನ್ ಇಟ್ಟ ದಳಪತಿ ವಿಜಯ್ ಬಾಡಿಗಾರ್ಡ್, ವಿಡಿಯೋ ವೈರಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಳಪತಿ ವಿಜಯ್  ನಟನೆಯ ಕೊನೆಯ ಚಿತ್ರ ‘ಜನ ನಾಯಗನ್’ ಪ್ರಾಜೆಕ್ಟ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ವಿಜಯ್ ಭೇಟಿಗೆ ಬಂದ ಅಭಿಯಾನಿಯತ್ತ ಬಾಡಿಗಾರ್ಡ್ ಗನ್ ಇಟ್ಟಿರುವ ವಿಡಿಯೋವೊಂದು ಸಖತ್ ವೈರಲ್ ಆಗ್ತಿದೆ. ಅಭಿಮಾನಿ ಜೊತೆಗಿನ ವಿಜಯ್ ಬಾಡಿಗಾರ್ಡ್ ವರ್ತನೆ ಕಂಡು ಫ್ಯಾನ್ಸ್ ಶಾಕ್ ಆಗಿದ್ದಾರೆ.

ಕೊಡೈಕೆನಾಲ್‌ನಲ್ಲಿ ಚಿತ್ರೀಕರಣ ಮುಗಿಸಿ ಮಧುರೈ ವಿಮಾನ ನಿಲ್ದಾಣಕ್ಕೆ ವಿಜಯ್ ಆಗಮಿಸಿದ್ದರು. ಈ ವೇಳೆ ಅಪಾರ ಸಂಖ್ಯೆ ಫ್ಯಾನ್ಸ್ ಜಮಾಯಿಸಿದ್ದರು. ಅಲ್ಲಿದ್ದ ವಯಸ್ಸಾದ ಅಭಿಮಾನಿಯೊಬ್ಬರು ಬಾಡಿಗಾರ್ಡ್ ಕಣ್ಣು ತಪ್ಪಿಸಿ ಭೇಟಿ ಮಾಡುವ ಪ್ರಯತ್ನ ಮಾಡಿದ್ದಾರೆ. ಆಗ ಅವರಿಗೆ ಗನ್ ತೋರಿಸಿ ಹೆದರಿಸಿದ್ದಾರೆ. ಆ ನಂತರ ಬಾಡಿಗಾರ್ಡ್ ಗನ್ ಅನ್ನು ಜೇಬಿಗೆ ಇಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!