‘Thank you Modi ji’ ವಕ್ಫ್‌ ಮಸೂದೆ ತಿದ್ದುಪಡಿಗೆ ಮುಸ್ಲಿಂ ಮಹಿಳೆಯರ ಬೆಂಬಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿ ಭೋಪಾಲ್‌ನ ಮುಸ್ಲಿಂ ಸಮುದಾಯದ ಮಹಿಳೆಯರು ಬೀದಿಗಿಳಿದಿದ್ದಾರೆ.

ಇಂದು ಮಧ್ಯಾಹ್ನ ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ವಕ್ಫ್‌ ತಿದ್ದುಪಡಿ ಮಸೂದೆ ಮಂಡಿಸಿದರು. ಇದಕ್ಕೂ ಮೊದಲು ಪೆಕಾರ್ಡ್‌ ಹಿಡಿದು ರಸ್ತೆಗಿಳಿದ ಮುಸ್ಲಿಂ ಮಹಿಳೆಯರು ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ಮೋದಿ ಜೀಗೆ ನಮ್ಮ ಬೆಂಬಲ’.. ‘ಧನ್ಯವಾದಗಳು ಮೋದಿ ಜೀ’ ಎಂದು ಬರೆದಿರುವ ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿದ್ದಾರೆ.

ವಕ್ಫ್‌ ತಿದ್ದುಪಡಿ ಮಸೂದೆ ಪರವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಇದೆ. ಆದರೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟ ಮಸೂದೆಗೆ ವಿರುದ್ಧವಾಗಿವೆ. ಮುಸ್ಲಿಂ ಸಮುದಾಯ ಕೂಡ ಮಸೂದೆಯನ್ನು ಬಲವಾಗಿ ವಿರೋಧಿಸಿವೆ.ಮಸೂದೆ ಮಂಡನೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಸಂಸದರಿಗೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!