ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಬಂದ್ ವಾಪಾಸ್ ತೆಗೆದುಕೊಂಡಿರುವ ಎಲ್ಲ ಸಂಘಟನೆಗಳಿಗೆ ನನ್ನ ಧನ್ಯವಾದಗಳು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ನಿರ್ಧಾರ ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ ಎಂದು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಖಂಡಿಸಿ ಹಾಗೂ ನೀರು ಹರಿಸುವುದನ್ನು ತಡೆಯುವಂತೆ ಆಗ್ರಹಿಸಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಲ್ಲ ನಗರಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾರ್ವಜನಿಕರಿಗೆ ಸಾರಿಗೆ ಸಂಚಾರಕ್ಕೆ ಯಾವುದೇ ಸಮಸ್ಯೆಯಾಗದಂತೆ ಗಮನವಹಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ನಿಷೇಧಿಸಲಾಗಿದೆ. ಸದ್ಯ ಬಂದ್‌ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.



