ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಡಾ. ಹೆಗ್ಗಡೆ, ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ, ಮಂಗಳೂರು:
ರಾಜ್ಯಸಭಾ ಸದಸ್ಯರಾಗಿ‌ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಗುರುವಾರ ಪ್ರಮಾಣವಚನ ಸ್ವೀಕಾರ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಸಂಸತ್ ಭವನದಲ್ಲಿ ಭಾಜಪಾ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೆಗ್ಗಡೆ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು.
ವೀರೇಂದ್ರ ಹೆಗ್ಗಡೆಯವರ ಪ್ರಮಾಣ ವಚನ ಸ್ವೀಕಾರದ ಬಳಿಕ ನಳಿನ್ ಕುಮಾರ್ ಕಟೀಲ್ ಹಾಗೂ ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೃತಜ್ಞತೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ಮೆಚ್ಚುಗೆಯ ಮಾತುಗಳನ್ನು ಆಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!