ಬಿಜೆಪಿಗೆ ಮತ ನೀಡಿ ಹರಸಿದ ಎಲ್ಲ ಮತದಾರ ಪ್ರಭುಗಳಿಗೆ ಕೃತಜ್ಞತೆ: ಜಾಧವ್

ಹೊಸದಿಗಂತ ವರದಿ: ಕಲಬುರಗಿ:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಹರಸಿದ ಎಲ್ಲ ಮತದಾರ ಪ್ರಭುಗಳಿಗೆ ಮತ್ತು ಅಭಿಮಾನಿಗಳಿಗೆ ಕಾರ್ಯಕರ್ತರಿಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಡಾ. ಉಮೇಶ್ ಜಾಧವ್ ಅವರು ತಿಳಿಸಿದ್ದಾರೆ.

ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಆರು ಲಕ್ಷಕ್ಕಿಂತಲೂ ಹೆಚ್ಚು ಮತವನ್ನು ನೀಡಿ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕಲ್ಬುರ್ಗಿಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮಾನ್ಯತೆ ನೀಡಿದ ಮತದಾರರಿಗೆ ನಾನು ಶಿರಸಾಷ್ಟಾಂಗ ಪ್ರಣಾಮಗಳನ್ನು ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸೋಲನ್ನು ಕೂಡ ಸಮಾನವಾಗಿ ಸ್ವೀಕರಿಸುತ್ತೇನೆ ಹಾಗೂ ಕ್ಷೇತ್ರದ ಜನತೆ ಜೊತೆ ಸದಾ ಸ್ಪಂದಿಸುತ್ತೇನೆ ಎಂದರು .

ಕೇಂದ್ರದಲ್ಲಿ ಎನ್ ಡಿ ಎ ಸರಕಾರವೇ ಅಧಿಕಾರದಲ್ಲಿ ಇರುವುದರಿಂದ ಕೇಂದ್ರದ ಯೋಜನೆಗಳನ್ನು ಕಲಬುರ್ಗಿಗೆ ತರಲು ಸದಾ ತಮ್ಮ ಜೊತೆ ಇರುತ್ತೇನೆ. ಚುನಾವಣೆಯ ಸೋಲನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿ ಪಕ್ಷದ ಕಾರ್ಯಕರ್ತರು ನಾಡಿನ ಅಭಿವೃದ್ಧಿ ಮತ್ತು ಪಕ್ಷದ ಹಿತಕ್ಕಾಗಿ ಮುಂದೆಯೂ ಕೂಡ ಅಹರ್ನಿಶಿ ದುಡಿಯುವಂತೆ ಮನವಿ ಮಾಡಿಕೊಳ್ಳುತ್ತೇನೆ ಮತ್ತು ಸದಾ ತಮ್ಮೊಂದಿಗೆ ಇರುತ್ತೇನೆ ಎಂದು ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!