ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ದರ್ಶನ್ ಐದು ತಿಂಗಳ ನಂತರ ಜಾಮೀನಿನ ಮೇಲೆ ಹೊರಬರಲಿದ್ದಾರೆ.ದರ್ಶನ್‌ಗೆ ಹೈಕೋರ್ಟ್ ಆರು ವಾರಗಳ ಕಾಲ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಪತ್ನಿ ವಿಜಯಲಕ್ಷ್ಮಿ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ್ದಾರೆ.
ಪತಿಗೆ ಜಾಮೀನು ಸಿಗುತ್ತಿದ್ದಂತೆ ವಿಜಯಲಕ್ಷ್ಮಿ ಅವರು ಕಾಮಾಕ್ಯ ದೇವಸ್ಥಾನದ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ‘ಥ್ಯಾಂಕ್‌ಫುಲ್, ಗ್ರೇಟ್‌ಫುಲ್, ಬ್ಲೆಸ್ಡ್’ ಎಂದು ಸ್ಟೋರಿ ಹಾಕಿದ್ದಾರೆ.
ವಿಜಯಲಕ್ಷ್ಮಿ ಇತ್ತೀಚೆಗೆ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.