ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿವರ್ಸ್ ತೆಗೆದುಕೊಳ್ಳುವ ವೇಳೆ ಚಾಲಕನ ಅಜಾಗರೂಕತೆಯಿಂದ ಥಾರ್ ಮೂವರು ವಿದ್ಯಾರ್ಥಿನಿಯರ ಮೇಲೆ ಹರಿದಿದ್ದು, ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ.
ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ ಭೂಮಿಕಾ ಮೃತರು. ಮೊದಲ ವರ್ಷದ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯರಾದ ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿನಿಯರು ಮನೆಗೆ ಬರುತ್ತಿದ್ದರು. ಈ ವೇಳೆ ರಿವರ್ಸ್ ತೆಗೆದುಕೊಳ್ಳುವಾಗ ಅಪಘಾತ ಸಂಭವಿಸಿದೆ. ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.



