ಹಿರಿಯ ನಟಿ ದಿ.ಲೀಲಾವತಿಯವರ ಎಸ್ಟೇಟ್ ಬಳಿ ಅಗ್ನಿ ಅವಘಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ನಟಿ ದಿ.ಲೀಲಾವತಿಯವರ ಎಸ್ಟೇಟ್ ಬಳಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಹಿರಿಯ ನಟಿ ದಿ.ಲೀಲಾವತಿ ತೋಟದ ಪಕ್ಕದಲ್ಲಿ ಈ ಅವಘಡ ಸಂಭವಿಸಿದೆ. ಅರಣ್ಯ ಪ್ರದೇಶ ಹಾಗೂ ಅಕ್ಕಪಕ್ಕದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿನೋದ್ ರಾಜ್ ತೋಟದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವ ಮೊದಲೇ ತೋಟದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.

ಬೇಸಿಗೆ ಹಿನ್ನೆಲೆ ಒಣಗಿದ ಅರಣ್ಯದಿಂದ ಕಾಡ್ಗಿಚ್ಚು ಉಂಟಾಗಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸಂಪೂರ್ಣವಾಗಿ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!