ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ ಜನರು ಮತ್ತು ಕೃಷಿಕರು ಕಂಗೆಟ್ಟಿದ್ದಾರೆ. ಇಷ್ಟಾದರೂ ಕೂಡ ಕರ್ನಾಟಕದ ಕಾಂಗ್ರೆಸ್ ಸರಕಾರವು ಬರ ಪರಿಹಾರವನ್ನು ನೀಡುವುದರಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರವು ಕರ್ನಾಟಕಕ್ಕೆ ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದ ತಂಡವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಲ್ಲಿ ಮನವಿ ಮಾಡಿತು.
ದೆಹಲಿಯಲ್ಲಿ ಇಂದು ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ತಂಡದಲ್ಲಿ ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇದ್ದರು.