ಅನಂತಪುರ ಕ್ಷೇತ್ರದಲ್ಲಿ ಅಚ್ಚರಿಯ ಕ್ಷಣ: ಗರ್ಭಗುಡಿ ಸಮೀಪ ಮರಿ ಮೊಸಳೆ ವಿಶ್ರಾಂತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತಿಹಾಸ ಪ್ರಸಿದ್ಧ ಸರೋವರ ಕ್ಷೇತ್ರ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪುರ ದೇವಾಲಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಮರಿ ಮೊಸಳೆ ಮೊದಲ ಬಾರಿಗೆ ದೇವಾಲಯದ ಪ್ರಾಂಗಣವೇರಿ ಗರ್ಭಗುಡಿಯ ಹತ್ತಿರವೇ ವಿಶ್ರಾಂತಿ ಪಡೆದಿದೆ.

ಈ ಸಮಯದಲ್ಲಿ ಕ್ಷೇತ್ರದ ನಡೆ (ದಾರಿ) ಮುಚ್ಚಿತ್ತು. ಸಂಜೆ ಬಂದು ಕ್ಷೇತ್ರದ ನಡೆ ತೆರೆದ ಅರ್ಚಕರಿಗೆ ಈ ಪುಣ್ಯ ದೃಶ್ಯ ಗೋಚರವಾಗಿದ್ದು, ತಮ್ಮ ಮೊಬೈಲ್‌ ನಲ್ಲಿ ಸೆರೆ ಹಿಡಿದು ಭಕ್ತಿ, ಭಾವುಕತೆಯಿಂದ ಹಂಚಿದ್ದಾರೆ.

ಈ ಹಿಂದೆ 2022ರ ಅಕ್ಟೋಬರ್ 9ರಂದು’ಬಬಿಯಾ’ಮೊಸಳೆ ನಿಧನವಾಗಿತ್ತು. ಬಬಿಯಾ ಹರಿ ಪಾದ ಸೇರಿದ ನಂತರ ಕಾರಣಿಕ ಎಂಬಂತೆ ಮರಿ ಮೊಸಳೆ ಪ್ರತ್ಯಕ್ಷವಾಗಿತ್ತು. ಆದರೆ ಈಗ ಸ್ಪಷ್ಟವಾಗಿ ದೇವಾಲಯದ ಗರ್ಭಗುಡಿ ಸಮೀಪವೇ ಪ್ರತ್ಯಕ್ಷವಾಗಿ ತನ್ನ ಇರುವಿಕೆಯನ್ನು ಸ್ಪಷ್ಟಪಡಿಸಿದೆ. ಈ ಮರಿಗೂ ಬಬಿಯಾ ಎಂಬ ಹೆಸರಿನಿಂದ ಕರೆಯಲಾರಂಭಿಸಿದರು. ಸಸ್ಯಹಾರಿಯಾಗಿತ್ತು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!