ನೆನಪಿನಂಗಳದಿಂದ ಇನ್ನೂ ಮಾಸಿಲ್ಲ ಆ ಮಾತು: ಪಂಕಜ್ ಉದಾಸ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪದ್ಮಶ್ರೀ ಪುರಸ್ಕೃತ ಖ್ಯಾತ ಗಝಲ್ ಗಾಯಕ ಪಂಕಜ್ ಉದಾಸ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

‘ಪಂಕಜ್ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು. ತಮ್ಮ ಸ್ವರದ ಮೂಲಕ ವಿವಿಧ ಭಾವನೆಗಳನ್ನು ವ್ಯಕ್ತಪಡಿಸುವ ಶಕ್ತಿ ಅವರಿಗಿತ್ತು.ಅವರ ಗಝಲ್ ಗಳು ನಮ್ಮ ಅಂತರಾಳಕ್ಕೆ ಮುಟ್ಟುತ್ತಿದ್ದವು’ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪಂಕಜ್‌ ಅವರೊಂದಿಗೆ ನಡೆಸಿದ ಸಂವಾದಗಳು ನನ್ನ ನೆನಪಿನಂಗಳದಿಂದ ಮಾಸಿಲ್ಲ. ಅವರ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!