ಅನ್ಯ ಕೋಮಿನ ಯುವತಿಗೆ ಡ್ರಾಪ್ ನೀಡಿದಕ್ಕೆ ಯುವಕನ ಮೇಲೆ ಹಲ್ಲೆ

ಹೊಸದಿಗಂತ ವರದಿ, ಚಿತ್ರದುರ್ಗ:

ಅನ್ಯ ಕೋಮಿನ ಯುವತಿಗೆ ಡ್ರಾಪ್ ನೀಡಿದ ಪರಿಣಾಮ ಅನ್ಯ ಕೋಮಿನ ಕಿಡಿಗೇಡಿಗಳು ಹಿಂದು ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಈರಜ್ಜನಹಟ್ಟಿ ಗ್ರಾಮದ ಉಮೇಶ್ ಹಲ್ಲೆಗೊಳಲಾಗಿರುವ ಯುವಕ.ಈತ ಕಳೆದ ಹಲವು ದಿನಗಳಿಂದ ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈತನ ಜೊತೆಗೆ ಚೇಳುಗಿಡ್ಡ ಪ್ರದೇಶದ ಮುಸ್ಲಿಂ ಸಮುದಾಯದ ಯುವತಿಯೂ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಈ ಹಿಂದೆ ಸಾಕಷ್ಟು ಬಾರಿ ಈ ಯುವತಿಗೆ ಬೈಕ್‌ನಲ್ಲಿ ಡ್ರಾಪ್ ಮಾಡಿದ್ದರು.

ಅದರಂತೆ ಗುರುವಾರ ರಾತ್ರಿಯೂ ಯುವತಿಯ ಬೇಡಿಕೆಯ ಮೇರೆಗೆ ಆಕೆಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಿದ್ದರು. ಇದನ್ನು ಗಮನಿಸಿದ ಮುಸ್ಲಿಂ ಸಮುದಾಯದ ನಾಲ್ಕೈದು ಜನ ಕಿಡಿಗೇಡಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಕಂಡ ದಾರಿಹೋಕರೊಬ್ಬರು ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪರಾರಿಯಾಗಿರುವ ಇತರೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!