ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ ಚಂದ್ ಗೆಹ್ಲೋಟ್ ಅವರು ಆಯ್ಕೆಯಾದ ಹಿನ್ನೆಲೆ, ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಈ ಹಿನ್ನೆಲೆ ಅವರು ಇಂದು ರಾಜ್ಯಸಭಾ ಅಧ್ಯಕ್ಷರಾದ ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ವೆಂಕಯ್ಯ ನಾಯ್ಡು ಗೆಹಲೋತ್ ಅವರ ರಾಜೀನಾಮೆಯನ್ನ ಅಂಗೀಕಾರ ಮಾಡಿದ್ದಾರೆ.
ವಜೂಭಾಯಿ ವಾಲಾ ಅವರ ರಾಜ್ಯಪಾಲ ಅಧಿಕಾರಾವಧಿ ಕೆಲವು ತಿಂಗಳ ಹಿಂದೆಯೇ ಮುಗಿದಿದ್ದರೂ ಅವರನ್ನೇ ರಾಜ್ಯಪಾಲರಾಗಿ ಮುಂದುವರೆಸಲಾಗಿತ್ತು. ನಿನ್ನೆ ಗೆಹ್ಲೋಟ್ ಅವರನ್ನ ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.