ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರೋ ಅದ್ಭುತ ನಟ ವಿಕ್ರಾಂತ್ ಮಾಸ್ಸಿ ಅವರು ಒಂದು ಶಾಕಿಂಗ್ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ನಟನೆಗೆ ಗುಡ್ಬೈ ಹೇಳಿದ್ದಾರೆ.
ಅವರ ಈ ನಿರ್ಧಾರಕ್ಕೆ ಅನೇಕರು ಬೇಸರ ಹೊರಹಾಕಿದ್ದಾರೆ. 37ನೇ ವಯಸ್ಸಿಗೆ ಅವರು ನಿವೃತ್ತಿ ಘೋಷಣೆ ಮಾಡಿದ್ದು ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಕ್ರಾಂತ್ ಅವರು ಪೋಸ್ಟ್ ಮಾಡಿದ್ದಾರೆ. ‘ಕಳೆದ ಕೆಲ ವರ್ಷಗಳು ಉತ್ತಮವಾಗಿತ್ತು. ನಿಮ್ಮ ನಿರಂತರ ಬೆಂಬಲಕ್ಕಾಗಿ ನಾನು ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ಆದರೆ ನಾನು ಮುಂದೆ ಬಂದಂತೆಲ್ಲ ಮಗನಾಗಿ, ಗಂಡನಾಗಿ, ತಂದೆಯಾಗಿ ಮನೆಗೆ ಹಿಂತಿರುಗಲು ಇದು ಸರಿಯಾದ ಸಮಯ ಎಂದು ನಾನು ಅರಿತುಕೊಂಡೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಈ ಮೂಲಕ ಅವರು ಮುಂದಿನ ದಿನಗಳಲ್ಲಿ ಕುಟುಂಬಕ್ಕೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಕ್ರಾಂತ್ ಪೋಸ್ಟ್ ಮಾಡಿದ್ದಾರೆ.
View this post on Instagram