ಕಲಬುರಗಿ| 73ನೇ ಗಣರಾಜ್ಯೋತ್ಸವ ಸರಳ ಆಚರಣೆ : ಜಿಲಾಧಿಕಾರಿ ಜ್ಯೋತ್ಸ್ನಾ

 ಹೊಸ ದಿಗಂತ ವರದಿ, ಕಲಬುರಗಿ:

ಈ ಬಾರಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಕೈಗೊಳ್ಳುವ ಮೂಲಕ 73ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 73ನೇ ಗಣರಾಜ್ಯೋತ್ಸವ ಆಚರಣೆಯ ಪೂರ್ವಸಿದ್ಧತಾ
ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಜನವರಿ 26ರಂದು ಸರ್ಕಾರಿ ಕಚೇರಿ ಮತ್ತು ಶಾಲೆಗಳಲ್ಲಿ ಅಧಿಕಾರಿಗಳು ಮತು ಸಿಬ್ಬಂದಿ ವರ್ಗದವರು ಬೆಳಿಗ್ಗೆ
7.30ರೊಳಗೆ ಧ್ವಜಾರೋಹಣ ನೆರವೇರಿಸಬೇಕು. ತದನಂತರ ಪೊಲೀಸ್ ಡಿಎಆರ್ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ
ರಾಷ್ಟ್ರಧ್ವಜಾರೋಣ ನೆರವೇರಲಿದ್ದು, ಈ ಪ್ರಧಾನ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಬೇಕು ಎಂದು
ಅವರು ತಿಳಿಸಿದರು.

ಕಾರ್ಯಕ್ರಮದ ವೇದಿಕೆ, ಶಾಮಿಯಾನ ಮುಂತಾದ ವ್ಯವಸ್ಥೆ ಮಾಡಬೇಕು. ಅತಿಥಿಗಳು, ಗಣ್ಯರು, ಪತ್ರಕರ್ತರು
ಮುಂತಾದವರಿಗೆ ಆಸನ ವ್ಯವಸ್ಥೆ ಯಾಗಬೇಕು ಎಂದು ತಿಳಿಸಿದ ಅವರು, ಕಾರ್ಯಕ್ರಮ ನಡೆಯುವ ಸಂದರ್ಭದಲಿ ್ಲ ಅನಧಿಕೃತ
ವ್ಯಕ್ತಿಗಳು ವೇದಿಕೆಗೆ ಬರದಂತೆ ತಡೆಯಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರರು ಕ್ರಮವಹಿಸಬೇಕು. ನಗರ
ಪೊಲೀಸರನ್ನೊಳಗೊಂಡ ವಿಶೇಷ ತಂಡ ರಚಿಸಿ, ಕ್ರಮಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಪೊಲೀಸ್, ಕೆ.ಎಸ್.ಆರ್.ಪಿ, ಅಬಕಾರಿ ಗಾರ್ಡ್, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ಅರಣ್ಯ ಇಲಾಖೆ
ಇವುಗಳಿಂದ ಪಥಸಂಚಲನ ನಡೆಯುತ್ತಿದ್ದು, ಈ ಸಂಬಂಧ ಮೂರು ದಿನಗಳ ಮುಂಚೆಯೇ ರಿಹರ್ಸಲ್ ನಡೆಸಬೇಕೆಂದು
ಅವರು ತಿಳಿಸಿದರು.
ಮುನ್ನೆಚ್ಚರಿಕೆಯಾಗಿ ಸ್ಥಳದಲ್ಲಿ ಅಗ್ನಿಶಾಮಕ ವಾಹನ ಮತು ್ತ ಅಂಬ್ಯುಲೆನ್ಸ್ ವ್ಯವಸ್ಥೆ ಗೊಳಿಸಬೇಕು ಎಂದು ತಿಳಿಸಿದ
ಅವರು ಜನವರಿ 25ರಂದು ಸಂಜೆ ಹೊತ್ತಿಗೆ ಕಾರ್ಯಕ್ರಮದ ಸ್ಥಳದಲ್ಲಿ ಎಲ್ಲಾ ಸಿದ್ಧತೆಗಳನ್ನು ಮುಗಿಸಿರಬೇಕು ಎಂದರು.

ಕೋವಿಡ್ ಸುರಕ್ಷತಾ ಕ್ರಮ

ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮಗಳ ಅನುಸರಿಸಬೇಕು. ತಪ್ಪದೇ ಎಲ್ಲರೂ ಮಾಸ್ಕ್ ಧರಿಸಿ ಆಗಮಿಸಬೇಕು. ಆರೋಗ್ಯ ಮತ್ತು ಕುಟುಂಬ ಇಲಾಖೆಯ ವತಿಯಿಂದ ಕಾರ್ಯಕ್ರಮದ ದ್ವಾರಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನ್ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಸಸಿ, ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿ ಇಶಾ ಪಂತ್, ಡಿಸಿಪಿ ಅಡ್ಡೂರು ಶ್ರೀನಿವಾಸಲು, ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್
ಸುಧಾಕರ್ ಲೋಖಂಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ, ಸಹಾಯಕ ಆಯುಕ್ತರಾದ ಮೋನಾ ರೂಟ್,
ಗಣರಾಜ್ಯೋತ್ಸವ ಸಮಿತಿ ಸದಸ್ಯರು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!