ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ನಿವೃತ್ತ ನರ್ಸಿಂಗ್ ಸೂಪರಿಂಟೆಂಡೆಂಟ್ 97 ವರ್ಷದ ಮೇರಿ ವಾಸ್ ಅವರು ಕೆನರಾ ಕಾಲೇಜಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ತಮ್ಮ ಇಳಿ ವಯಸ್ಸನ್ನೂ ಲೆಕ್ಕಿಸದೆ ವೀಲ್ ಚೆಯರ್ ಮೂಲಕವೇ ಆಗಮಿಸಿದ ಅವರು ತಮ್ಮ ಹಕ್ಕು ಚಲಾಯಿಸುವ ಮೂಲಕ ಬದ್ಧತೆ ಮೆರೆದರು.