ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೋಲಾರದ ಮುಳಬಾಗಿಲಿನ ವಿದ್ಯಾರ್ಥಿ ಉದಯ್ ಕುಮಾರ್ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಪೋಷಕರು ಬುದ್ದಿವಾದ ಹೇಳಿದ್ದು ಆತನಿಗೆ ಇಷ್ಟವಾಗಿರಲಿಲ್ಲ. ಈ ಕಾರಣದಿಂದ ಆತ ಮನೆಯಲ್ಲಿಯೇ ವಿಷ ಸೇವಿಸಿದ್ದ. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.