ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಹನುಮಂತನಗರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಂಜುನಾಥ್ನನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಜೊತೆಗಿದ್ದರು ಕೂಡ ಘಟನೆ ನಡೆದಿದೆ. ಇದರಿಂದ ಪ್ರಕರಣದಲ್ಲಿ ಮೆಲ್ನೋಟಕ್ಕೆ ಪೊಲೀಸರ ವೈಫಲ್ಯ ಕಂಡು ಬಂದಿದೆ. ಸಬ್ಇನ್ಸ್ಪೆಕ್ಟರ್ ಮಂಜುನಾಥ್ನನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ನ್ಯಾಯಾಂಗ ತನಿಖೆಯಾಗಲಿದೆ. ಇವರು ನೀಡುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಮಲ್ ಪಂತ್ ತಿಳಿಸಿದ್ದಾರೆ.
ವಂಚನೆ ಪ್ರಕರಣದಲ್ಲಿ ಸಿದ್ದಲಿಂಗಸ್ವಾಮಿ ಎಂಬಾತನನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದರು. ನಿನ್ನೆ ಮಧ್ಯಾಹ್ನ ಮಹಜರಿಗೆ ಕರೆದುಕೊಂಡು ಬಂದಾಗ ಮನೆಯ ಕಿಚನ್ ಮೂಲಕ ತೆರಳಿ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.