ಹೊಸದಿಗಂತ ವರದಿ ಚಿಕ್ಕಮಗಳೂರು:
ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಯತ್ನದ ಆರೋಪಿಯೊಬ್ಬ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
ಬಾಳೆಹೊನ್ನೂರಿನ ಎಂ.ಕೆ.ಪ್ರಾಣೇಶ ಪೊಲೀಸರ ಕಣ್ತಪ್ಪಿಸಿ ಪರಾರಿಯಾದಾತ. ಕೊಲೆಯತ್ನದ ಆರೋಪದ ಮೇಲೆ ಇತ್ತೀಚೆಗೆ ಬಂಧಿಸಲು ತೆರಳಿದ್ದಾಗ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಆತನ ಕಾಲಿಗೆ ಗುಂಡುಹಾರಿಸಿದ್ದರು.
ಆತನಿಗೆ ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ಬೆಳಗ್ಗೆ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕುಂಟುತ್ತಾ ನಡೆಯುವ ಈತನ ಸುಳಿವು ಸಿಕ್ಕಲ್ಲಿ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ 9480805100 ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.