ತೋಟದ ಮನೆ ಹಿಂಭಾಗದಲ್ಲಿ ಗಾಂಜಾ ಬೆಳೆ, ಮಾಲು ಸಹಿತ ಆರೋಪಿ ಪೊಲೀಸ್ ಬಲೆಗೆ

ಹೊಸದಿಗಂತ ವರದಿ ಮಡಿಕೇರಿ:

ತೋಟದ‌ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ‌ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ವೀರಾಜಪೇಟೆ ತಾಲೂಕಿನ ಕಂಡಂಗಾಲ ಗ್ರಾಮದ ನಿವಾಸಿ ನಂಬುಡಮಾಡ ವಿಜಯ್ ಭೀಮಯ್ಯ (39) ಬಂಧಿತ ಆರೋಪಿಯಾಗಿದ್ದು, ಮನೆಯ ಹಿಂಭಾಗದಲ್ಲಿ ಬೆಳೆದಿದ್ದ 1ಕೆ.ಜಿ 606ಗ್ರಾಂ ಹಸಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ/ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾಗಿದ್ದ ಸೋಮವಾರಪೇಟೆ ಡಿವೈಎಸ್ಪಿ ಆರ್. ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತ ನಿರೀಕ್ಷಕ ಗೋವಿಂದರಾಜು ಮತ್ತು ವೀರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್ಐ ಸಿ.ಸಿ. ಮಂಜುನಾಥ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ‌ ಕೆ. ರಾಮರಾಜನ್ ಅವರು ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!