ಗರ್ಲ್‌ಫ್ರೆಂಡ್‌ ಸೇರಿ ಕುಟುಂಬದ ಐವರನ್ನು ಬರ್ಬರವಾಗಿ ಕೊಂದು ಪೊಲೀಸರ ಮುಂದೆ ಶರಣಾದ ಆರೋಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇರಳದ ತಿರುವನಂತಪುರದ ವೆಂಜರಮೂಡು ಎಂಬಲ್ಲಿ 23 ವರ್ಷದ ಯುವಕನೊಬ್ಬ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು 5 ಮಂದಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಕೊಲೆ ಮಾಡಿದ ಆರೋಪಿಯನ್ನು ಅಫಾನ್ (23) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಇದಾದ ಬಳಿಕ ಆರೋಪಿ ತಾಯಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಬಳಿಕ ತಾನೂ ವಿಷ ಸೇವಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರು ಹತ್ಯೆಗೈದಿರುವುದಾಗಿ ಹೇಳಿಕೊಂಡಿದ್ದಾನೆ.

ಅಫಾನ್ ಹೇಳಿಕೆಯಿಂದ ಬೆಚ್ಚಿಬಿದ್ದ ಪೊಲೀಸರು ವಿಷ ಸೇವಿಸಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಳಿಕ ಆತನ ಹೇಳಿಕೆ ಮೇರೆಗೆ ಹಲ್ಲೆ ಹತ್ಯೆ ನಡೆದಿರುವ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಅದರಂತೆ ಆರೋಪಿಯ ಸಹೋದರ ಅಹ್ಸಾನ್, ಅಜ್ಜಿ ಸಲ್ಮಾ ಬೀವಿ, ಚಿಕ್ಕಪ್ಪ ಲತೀಫ್, ಚಿಕ್ಕಮ್ಮ ಶಾಹಿದಾ ಮತ್ತು ಆತನ ಗೆಳತಿ ಫರ್ಶಾನಾ ಸೇರಿದಂತೆ 5 ಜನರ ಸಾವನ್ನು ಪೊಲೀಸರು ಇದುವರೆಗೆ ಖಚಿತಪಡಿಸಿದ್ದಾರೆ.

ಜೊತೆಗೆ ತಾಯಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸ್ಥಳದಿಂದ ಸುತ್ತಿಗೆ ವಶಪಡಿಸಿಕೊಂಡಿದ್ದಾರೆ. ಬೆಳಗ್ಗೆ 10 ರಿಂದ ಸಂಜೆ 6ರ ಸಮಯದಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!