ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿ ಪರಾರಿಯಾಗಿದ್ದ ಕಾಮುಕನನ್ನು ಕೊತ್ತನೂರು ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮುನಿರುದ್ದೀನ್ ಖಾನ್ ಬಂಧಿತ ಆರೋಪಿ.
ನಗರದ ಕೊತ್ತನೂರು ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ತನ್ನ ಮನೆಯ ಮುಂದೆ ಬಿದ್ದಿದ್ದ ಬಾಕ್ಸ್ ಒಂದನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಆರೋಪಿ ಮುನಿರುದ್ದೀನ್ ಮೊದಲು ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಯುವತಿಯನ್ನು ತನ್ನತ್ತ ಬರುವಂತೆ ಸನ್ನೆ ಮಾಡಿದ್ದಾನೆ. ಯುವತಿ ಇದನ್ನು ನಿರ್ಲಕ್ಷಿಸಿ ಮುಂದೆ ಸಾಗುತ್ತಿದ್ದಾಗ, ಆಕೆಯನ್ನು ಹಿಂದಿನಿಂದ ತಬ್ಬಿಕೊಂಡು ಕಿರುಕುಳ ನೀಡಿದ್ದಾನೆ.
ನೊಂದ ಯುವತಿ ತಕ್ಷಣವೇ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಾಂಭೀರ್ಯವನ್ನು ಅರಿತ ಪೊಲೀಸರು ತನಿಖೆ ಕೈಗೊಂಡು, ಆರೋಪಿಯನ್ನು ಪತ್ತೆಹಚ್ಚಿ ಸದ್ಯ ಜೈಲಿಗಟ್ಟಿದ್ದಾರೆ.

