ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಶಾರುಖ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಫೈಜಾನ್ ಖನ್ನಾ ಎಂದು ಹೆಸರಿಸಲಾಗಿದ್ದು, ಮುಂಬೈ ಪೊಲೀಸರು ತನಿಖೆ ಆರಂಭಿಸಿ ಫೈಜಾನ್‌ನನ್ನು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಬಿಷ್ಟೋಯ್ ಗ್ಯಾಂಗ್ ನಿಂದ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಬಂದಿತ್ತು. ಇದಾದ ನಂತರ ಬಾಲಿವುಡ್‌ನ ನಟ ಶಾರುಖ್ ಖಾನ್‌ಗೂ ಕೊಲೆ ಬೆದರಿಕೆಗಳು ಬಂದಿದ್ದವು.
ವರದಿಯ ಪ್ರಕಾರ, ಈ ಬೆದರಿಕೆಗಳನ್ನು ಫೋನ್ ಮೂಲಕ ಮಾಡಲಾಗಿದೆ ಎಂದು ತನಿಖೆ ಮೂಲಕ ತಿಳಿದು ಬಂದಿದೆ.