ದಿಗಂತ ವರದಿ ಹುಬ್ಬಳ್ಳಿ:
ಇಲ್ಲಿಯ ನವನಗರ ಎಪಿಎಂಪಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ವೆಸಗಿ ಗರ್ಭಧಿರಿಸಲು ಕಾರಣನಾದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಸದ್ದಾಂ ಹುಸೇನ, ತಪ್ಪಿಸಿಕೊಳ್ಳು ಪ್ರಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹೊಡೆದಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಕಾಲೇಜ್ ವೊಂದರಲ್ಲಿ ಅಪ್ರಾಪ್ತ ಬಾಲಕಿ ಮನವೊಲಿಸಿ ಅತ್ಯಾಚಾರ ವೆಸಗಿದ್ದಲ್ಲದೇ ಅವರ ಕುಟುಂಬಸ್ಥರ ಮೇಲೆ ಕೊಲೆ ಬೆದರಿಕೆ ಹಾಕಿದ್ದ. ಬಾಲಕಿ ಆಸ್ಪತ್ರೆ ಹೋದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಹಾಗೂ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಕೈಗೊಂಡು ಆರೋಪಿಯನ್ನು ಬಂಧನ ಪ್ರಕ್ರಿಯೆಗೆ ರಾತ್ರಿ ಸುತಗಟ್ಟಿ ಗ್ರಾಮಕ್ಕೆ ತೆರಳಿದಾಗ, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆ ವೇಳೆ ಪೊಲೀಸರು ಅವನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಅವನಿಗೆ ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಕಿಮ್ಸ್‌ಗೆ ರವಾನಿಸಲಾಗಿದೆ.
ಆರೋಪಿಯ ಬೆರಳಚ್ಚು, ಓಡಾಡಿದ ಜಾಗ, ವೈದ್ಯಕೀಯ ಪರೀಕ್ಷೆ ಹಾಗೂ ಇತರ ಮಾಹಿತಿಗಳನ್ನು ಸಂಗ್ರಹಿಸಬೇಕಾಗುತ್ತದೆ. ಈ ಪ್ರಕ್ರಿಯೆಗೆ ಪೊಲೀಸರು ರಾತ್ರಿ 12.10ಕ್ಕೆ ಸುತಗಟ್ಟಿ ಗ್ರಾಮಕ್ಕೆ ತೆರಳಿದಾಗ ಅವನು ಪೊಲೀಸರಿಗೆ ಬಟನ್ ಚಾಕು ತೋರಿಸಿ, ಹಲ್ಲೆ ನಡೆಸಿದ್ದಾನೆ. ವಿದ್ಯಾಗಿರಿ ಪೊಲೀಸ್ ಠಾಣೆ ಸಿಬ್ಬಂದಿ ಅರುಣ್ ಹಾಗೂ ಇನ್‌ಸ್ಪೆಕ್ಟರ್ ಅವರ ಕಾಲಿಗೆ ಗಾಯವಾಗಿದೆ. ತಕ್ಷಣ ಇನ್‌ಸ್ಪೆಕ್ಟರ್ ಸಂಗಮೇಶ ಡಿಂಗಿನಾಳ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಗುಂಡು ಹಾರಿಸಿ, ಮತ್ತೊಂದು ಗುಂಡನ್ನು ಆರೋಪಿಯ ಎಡಗಾಲಿಗೆ ಹೊಡೆದಿದ್ದಾರೆ ಎಂದು ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ತಿಳಿಸಿದರು.
ಲವ್ ಜಿಹಾದ ಶಂಕೆ ಇದೆ ಎಂದು ಎಬಿವಿಪಿ ಹಾಗೂ ಹಿಂದೂ ಸಂಘಟನೆಗಳು ಶುಕ್ರವಾರ ಸಂಜೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.