ಮುದ್ದಾದ ಅವಳಿ ಮಕ್ಕಳಿಗೆ ಹೆಸರಿಟ್ಟ ನಟಿ ಅಮೂಲ್ಯ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವುಡ್ ನಟಿ ಅಮೂಲ್ಯ ಅವರ ಇಬ್ಬರು ಮುದ್ದು ಮಕ್ಕ ಳಿಗೆ ಇಂದು ನಾಮಕರಣ ಮಾಡಿದ್ದಾರೆ.

ಅಮೂಲ್ಯ ಜಗದೀಶ್ ದಂಪತಿ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್(Atharva & Aadhav) ಎಂಬ ಹೆಸರನ್ನು ಇಟ್ಟಿದ್ದಾರೆ.
ಚಂದನವನದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಯಾಗಿ ಮಿಂಚಿದ ಅಮೂಲ್ಯ ಮದುವೆ, ಸಂಸಾರ, ಮಕ್ಕಳು ಎಂದು ಬ್ಯುಸಿಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು.

ಇನ್ನೂ ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ. ಮುದ್ದಾದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಶುಭಹಾರೈಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!