ಹೈಕೋರ್ಟ್ ತೀರ್ಪಿನ ನಂತರದ ಬೆಳವಣಿಗೆಗಳು ಶೋಭೆ ತರುವಂತಹದಲ್ಲ: ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ,ಗದಗ:

ಹಿಜಾಬ್ ಕುರಿತು ಹೈಕೋರ್ಟ ತೀರ್ಪಿನ ವಿರುದ್ಧ ಬಂದ್ ಆಚರಣೆ, ನಂತರದ ಬೆಳವಣಿಗೆ ಯಾರಿಗೂ ಶೋಭೆ ತರುವಂತಹದು ಅಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು.
ಅವರು ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದ ಕುರಿತು ಮಾತನಾಡಿ, ಹಿಜಾಬ್ ವಿಚಾರದಲ್ಲಿ ಮಕ್ಕಳ ಶಿಕ್ಷಣ ಹಾಳ ಮಾಡುವ ವ್ಯವಸ್ಥೆ ನಡೆಯಿತು. ಮುಸ್ಲಿಂ ಸಮುದಾಯ ವ್ಯಾಪಾರಿಗಳು ಅಂಗಡಿ ಮುಗ್ಗಟ್ಟುಗಳ ಬಾಗಿಲು ಹಾಕಿದರು. ಈ ರೀತಿ ಪ್ರಕ್ರಿಯೆಗಳಿಂದ ಬೇರೆ ಬೇರೆ ಬೆಳವಣಿಗೆಗಳು ನಡೆಯುತ್ತಿವೆ. ಹೈಕೋರ್ಟ್ ತೀರ್ಪು ವಿರುದ್ಧ ನಡೆದುಕೊಂಡ ರೀತಿಯೇ ಇದಕ್ಕೆಲ್ಲ ಕಾರಣವಾಗಿದೆ ಈ ಬಗ್ಗೆ ಪಕ್ಷದ ಹಿರಿಯರು ಗಂಭೀರವಾಗಿ ಚಿಂತನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದವರು ಹತಾಷೆಯಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಧಿಕಾರಕ್ಕೆ ಬಂದೇ ಬಿಡುತ್ತೆವೆ ಎನ್ನುವ ಉತ್ಸಾಹದಲ್ಲಿ ಕಾಂಗ್ರೆಸ್ ನಾಯಕರು ಇದ್ದರು. ಆದರೆ, ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ನಾಯಕರಿಗೆ ನಿದ್ರೆ ಬರುತ್ತಿಲ್ಲ, ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲು ಕಾಂಗ್ರೆಸ್ ನಾಯಕರ ನಡುವಳಿಕೆಯಿಂದಲೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಲೇವಡಿ ಮಾಡಿದರು.

ಗದಗ ವಿಧಾನಸಭಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು 224 ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಇದ್ದರೆ ನಿಲ್ಲಬಹುದಿತ್ತು.ಈ ಹಿಂದೆ ಉಪಚುನಾವಣೆ ವೇಳೆಯೂ ಸಹ ನನ್ನ ಹೆಸರು ಕೇಳಿ ಬರುತ್ತಿತ್ತು. ಬೇರೆ ಕಡೆ ಹೋದಾಗಲೂ ಈ ಮಾತು ಕೇಳಿ ಬರುತ್ತಿವೆ. ಆದರೆ, ನಾನು ರಾಜ್ಯದ ಉಪಾಧ್ಯಕ್ಷನಾಗಿ ರಾಜ್ಯದಾದ್ಯಂತ ಸಂಘಟನೆ ಮಾಡುತ್ತಿದ್ದೆನೆ ಈ ಬಗ್ಗೆ ನಾನು ಮಾತನಾಡುವದಿಲ್ಲ ನಮ್ಮ ಹಿರಿಯರು ನಿರ್ಧಾರ ಮಾಡ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!