ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಇಷ್ಟು ದಿನ ಸಾಧಾರಣವಾಗಿದ್ದ ಮೈಸೂರು ಮತ್ತು ಶಿವಮೊಗ್ಗದ ಗಾಳಿಯ ಗುಣಮಟ್ಟ ಇಂದು ಏಕಾಏಕಿ ಬೆಂಗಳೂರನ್ನೂ ಮೀರಿಸಿದೆ.
ಬೆಂಗಳೂರಿನ ಗಾಳಿಯ ಗುಣಮಟ್ಟ 154 ಇದ್ದು, ಮೈಸೂರು ಮತ್ತು ಶಿವಮೊಗ್ಗದಲ್ಲಿ 172ರಷ್ಟು ಏರ್ ಕ್ವಾಲಿಟಿ ಹದಗೆಟ್ಟಿದೆ. ಕೆಲ ದಿನಗಳ ಹಿಂದೆ ಈ ಪ್ರದೇಶಗಳಲ್ಲಿ ನೂರಕ್ಕಿಂತ ಕಡಿಮೆಯಿದ್ದ ಗುಣಮಟ್ಟ ಒಂದೇ ಸಮನೆ ಹೆಚ್ಚಾಗಿರುವುದು ಆತಂಕ ಮೂಡಿಸಿದೆ.
ಇದನ್ನೂ ಓದಿ: VIRAL | ಈ ಕೆಲಸ ಪ್ರಯಾಣಿಕರು ಯಾರೂ ಮಾಡೋದಿಲ್ಲ! ರೈಲಿನ ಸಿಂಕ್‌ನಲ್ಲಿ ಕಟ್ಟಿದ್ದ ಕಸ ತೆಗೆದ ವ್ಯಕ್ತಿ
ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಣ್ಣು ಕೊರಕು, ಉಸಿರಾಟದ ತೊಂದರೆ ಮತ್ತು ಅಲರ್ಜಿಗಳು ಕಾಣಿಸಿಕೊಳ್ಳಬಹುದು.
ಇಂದು ಬೆಂಗಳೂರಿನ PM2.5 62 ಮತ್ತು PM10 85 ಇದೆ. PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆದರೆ ಬೆಂಗಳೂರಿನಲ್ಲಿಂದು ಈ ಸೂಕ್ಷ್ಮ ಕಣಗಳ ಪ್ರಮಾಣ ಕಡಿಮೆಯಿದ್ದು, ಉಸಿರಾಟಕ್ಕೆ ಯೋಗ್ಯವಲ್ಲದಿದ್ದರೂ ಮುಂಚಿನ ದಿನಗಳಷ್ಟು ಹಾನಿಕಾರಕವೇನಲ್ಲ.

