ಮತದಾರರ ಪಟ್ಟಿಯಿಂದ ಕೆಲವರನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಸುಳ್ಳು: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಮತದಾರರ ಪಟ್ಟಿಯಿಂದ ಕೆಲವರನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಸುಳ್ಳು. ಚುನಾವಣಾ ಆಯೋಗವೇ ಸ್ವತಃ ಮತದಾರರ ಸಮೀಕ್ಷೆ ಮಾಡಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿದೆ. ಚುನಾವಣಾ ಆಯೋಗಕ್ಕೆ ತೆಗೆದು ಹಾಕಿದ ಮತ್ತು ಸೇರ್ಪಡೆಗೊಳಿಸುವ ಬಗ್ಗೆ ದೂರುಗಳು ಬರುತ್ತಿವೆ. ಅದನ್ನು ಆಧರಿಸಿ ಚುನಾವಣಾ ಆಯೋಗವು ಸಂಬಂಧಿಸಿದ ಅಧಿಕಾರಿಗಳಿಂದ ತನಿಖೆ ನಡೆಸಿ ಸರಿಪಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಮತದಾರ ಪಟ್ಟಿಯಲ್ಲಿ ಅನಧಿಕೃತವಾಗಿ ಸೇರ್ಪಡೆಗೊಂಡವರ ಹೆಸರನ್ನು ತೆಗೆದು ಹಾಕಲಾಗುತ್ತಿದೆ. ಅಧಿಕೃತವಿದ್ದವರಿಗೆ ಯಾವುದೇ ಕಾರಣಕ್ಕೂ ಮತದಾನ ಹಕ್ಕು ಕಸಿದುಕೊಳ್ಳುವ ಕಾರ್ಯವಾಗುತ್ತಿಲ್ಲ. ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಹಕ್ಕಾಗಿದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಪೊಲೀಸರಿಂದ ಹಲ್ಲೆ ಮಾಡಿದ ವಿಚಾರವಾಗಿ ಪೊಲೀಸ್ ಆಯುಕ್ತರು ಹಾಗೂ ಎಸ್ ಪಿ ಅವರಿಗೆ ತನಿಖೆ ಮಾಡಲು ಆದೇಶಿಸಲಾಗಿದೆ. ಗಡಿ ವಿಚಾರ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವ್ಯಾಜ್ಯ ಇರುವುದರಿಂದ ಈಗ ಆ ವಿಷಯ ಮಹಾರಾಷ್ಟ್ರ ಪ್ರಸ್ತಾಪ ಮಾಡಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!