ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ವರ್ಷದಂತೆ ಈ ವರ್ಷವೂ ತಲಕಾವೇರಿಯಲ್ಲಿ ನಡೆಯುವ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ.
ಅ.17 ರಂದು ಬೆಳಗ್ಗೆ 7:40 ಕ್ಕೆ ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ.
ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಸಿದ್ಧತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ.