ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ದಸರಾವನ್ನು ಯಾರು ಉದ್ಘಾಟನೆ ಮಾಡುತ್ತಾರೆ ಅನ್ನೋದಕ್ಕೆ ಉತ್ತರ ಸಿಕ್ಕಿದೆ! ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದ ಒಬ್ಬ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತೋಷ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು. ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿರುವ ಪ್ರಗತಿ ಪರ ಚಿಂತಕರು. ಹಾಗಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ, ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.