ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಉತ್ತಮವಾಗಿದೆ: ಶಾಸಕ ಜಗದೀಶ್‌ ಶೆಟ್ಟರ್

ಹೊಸದಿಗಂತ ವರದಿ, ಹುಬ್ಬಳ್ಳಿ:

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದರಿಂದ ಉತ್ತಮ. ಇದು ಆಡಳಿತ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ ಎಂದು ನನ್ನ ವ್ಯಯಕ್ತಿಕ ಅಭಿಪ್ರಾಯವಾಗಿದೆ ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ಸಲುವಾಗಿ ಮುಖ್ಯಮಂತ್ರಿಯವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಇದರಿಂದ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗುತ್ತದೆ. ಮುಂಬರುವ ಚುನಾವಣೆ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದರು.
ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ, ಸಿದ್ದರಾಮಯ್ಯ ಅವರು ಯಾವಾಗಲೂ ಈ ಮಾತು ಹೇಳಿಕೊಂಡು ಇರುತ್ತಾರೆ. ಆದರೆ ಕಾಂಗ್ರೆಸ್ ಜಿಲ್ಲಾ ಮುಂಖಡರು, ಶಾಸಕರು ಮತ್ತು ಮಾಜಿ ಶಾಸಕರು ಬಿಜೆಪಿ ಆಡಳಿತ ವ್ಯವಸ್ಥೆ ಮೆಚ್ಚಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ ಮತ್ತು ಅಸ್ತಿತ್ವಕಳೆದುಕೊಂಡಿದೆ. ಆದರೆ ಯಾರಾದರೂ ಕಾಂಗ್ರೆಸ್ ಗೆ ಸೇರಿಕೊಂಡರೆ ಅವರಂಥಹ ಮುರ್ಖರು ಯಾರು ಇಲ್ಲ ಎಂದು ತಿಳಿಸಿದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಹುಳಾ ಬಿಡುವ ಕೆಲಸ ಮಾಡುತ್ತಿದ್ದಾರೆ. ಅವರು ಹೇಳುವಂತೆ ಕಾಂಗ್ರೆಸ್ ಯಾರು ಸೇರ್ಪಡೆಯಾಗುತ್ತಿದ್ದಾರೆ ಅವರ ಧೈರ್ಯವಾಗಿ ಹೇಳಿಬಿಡಲಿ ಕದ್ದು ಮುಚ್ಚಿ ಮಾಡುವುದು ಬೇಡಾ ನೇರವಾಗಿ ಹೇಳಲಿ ಎಂದು ವಾಗ್ವಾದ ನಡೆಸಿದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಹತ್ತಿರದ ವ್ಯಕ್ತಿ ಸಿಂಗ್ ಎಂಬುವವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಸ್ಥಿತಿ ಏನು ಇದೆ ಎಂದು ಅರ್ಥ ಮಾಡಿಕೊಳ್ಳಬೇಕು. ಅಷ್ಟೇ ಅಲ್ಲ ಬರುವ ದಿನಗಳಲ್ಲಿ ಪೂರ್ತಿ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮಾಡಲಿಲ್ಲ ಅಂದರೆ ಕಾಂಗ್ರೆಸ್ ಹೋಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ, ಆ ರೀತಿ ಆಗುವುದಿಲ್ಲ. ರಾಜ್ಯದಲ್ಲಿ ಪಕ್ಷ ಸಂಘಟನಾತ್ಮಕವಾಗಿದೆ ಇದು ಎಲ್ಲ ಶುದ್ಧ ಸುಳ್ಳು ಎಂದು ತಿಳಿಸಿದರು.
ಮಣಿಪುರ, ಗೋವಾ, ಉತ್ತರ ಪ್ರದೇಶ, ಉತ್ತರಾಖಾಂಡ ಸೇರಿದಂತೆ ಅನೇಕ ರಾಜ್ಯದಿಂದ ಕಾಂಗ್ರೆಸ್ ನಶಿಸಿಹೋಗುತ್ತದೆ ಕಾಂಗ್ರೆಸ್ ಯಾರು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!